ವಿದೇಶಾಂಗ ವ್ಯವಹಾರ ಸಚಿವ ಖಾತೆಗೆ ರಾಜೀನಾಮೆ ನೀಡಿರುವ ಎಸ್.ಎಂ. ಕೃಷ್ಣ ರಾಜ್ಯ ರಾಜಕಾರಣಕ್ಕೆ ಯಾವ ಪಾತ್ರ ಧರಿಸಿ ಮರಳಲಿದ್ದಾರೆ ಎನ್ನುವುದು ಇನ್ನೂ ಸ್ಪಷ್ಟ ಇಲ್ಲ. ಆದರೆ ರಾಜಕೀಯ ಸನ್ಯಾಸವನ್ನು ಘೋಷಿಸದೆ ಇರುವುದರಿಂದ ಕೃಷ್ಣ ಅವರು ಬೆಂಗಳೂರಿಗೆ ಬಂದು ಇಲ್ಲಿನ ರಾಜಕೀಯವನ್ನು `ಯುವಕರಿಗೆ~ ಬಿಟ್ಟುಕೊಟ್ಟು ತಮ್ಮ ನೆಚ್ಚಿನ ಶಟಲ್ ಬ್ಯಾಡ್ಮಿಂಟನ್ ಆಡುತ್ತಾ ಕಾಲ ಕಳೆಯಲಿದ್ದಾರೆ ಎಂದು ಹೇಳಲಾಗುವುದಿಲ್ಲ.
ಅವರು ಅಂತಹ ನಿರ್ಧಾರ ಮಾಡಿದರೂ ಬೆಂಬಲಿಗರು ಅವರನ್ನು ಸುಮ್ಮನಿರಲು ಬಿಡಲಾರರು. ಪ್ರದೇಶ ಕಾಂಗ್ರೆಸ್ ಅಧ್ಯಕ್ಷತೆ, ಮುಖ್ಯಮಂತ್ರಿ, ರಾಜ್ಯಪಾಲ, ಕೇಂದ್ರ ಸಚಿವ ಹೀಗೆ ರಾಜಕಾರಣದಲ್ಲಿ ಮಹತ್ವದ ಸ್ಥಾನಗಳೆಲ್ಲವನ್ನೂ ಅಲಂಕರಿಸಿರುವ ಕೃಷ್ಣ ಅವರಿಗೆ ಅವರದ್ದೇ ಆಗಿರುವ ಬೆಂಬಲಿಗರಿದ್ದಾರೆ.
ಅವರು ಅಂತಹ ನಿರ್ಧಾರ ಮಾಡಿದರೂ ಬೆಂಬಲಿಗರು ಅವರನ್ನು ಸುಮ್ಮನಿರಲು ಬಿಡಲಾರರು. ಪ್ರದೇಶ ಕಾಂಗ್ರೆಸ್ ಅಧ್ಯಕ್ಷತೆ, ಮುಖ್ಯಮಂತ್ರಿ, ರಾಜ್ಯಪಾಲ, ಕೇಂದ್ರ ಸಚಿವ ಹೀಗೆ ರಾಜಕಾರಣದಲ್ಲಿ ಮಹತ್ವದ ಸ್ಥಾನಗಳೆಲ್ಲವನ್ನೂ ಅಲಂಕರಿಸಿರುವ ಕೃಷ್ಣ ಅವರಿಗೆ ಅವರದ್ದೇ ಆಗಿರುವ ಬೆಂಬಲಿಗರಿದ್ದಾರೆ.
ಅವರ ಶಕ್ತಿ, ಅನುಭವ, ಸಂಪರ್ಕ, ಸಂಪನ್ಮೂಲಗಳ ವಿಸ್ತಾರ ದೊಡ್ಡದು. ವಯಸ್ಸಿನಲ್ಲಿಯೂ ಹಿರಿಯರು, ಹೈಕಮಾಂಡ್‌ನಲ್ಲಿ ಈಗಲೂ ಅವರ ಮಾತಿಗೆ ಒಂದಿಷ್ಟು ಬೆಲೆ ಇದೆ. ಆದುದರಿಂದ ಅವರು ಕರ್ನಾಟಕಕ್ಕೆ ಯಾವ ಪಾತ್ರದಲ್ಲಿ ಪ್ರವೇಶಿಸಿದರೂ ರಾಜ್ಯ ರಾಜಕಾರಣ ಮೊದಲಿನಂತೆ ಇರಲಾರದು.
ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ಕೃಷ್ಣ ಸಕ್ರಿಯವಾದರೆ ಅನುಕೂಲತೆಗಳಿವೆಯೇ? ಖಂಡಿತ ಇವೆ. ಮೊದಲನೆಯದಾಗಿ ಕೃಷ್ಣ ತಮ್ಮ `ಇಮೇಜ್~ ಬಗ್ಗೆ ಸದಾ ಧ್ಯಾನಸ್ಥರಾಗಿರುವವರು. ವಿದೇಶಿ ಶಿಕ್ಷಣ, ಇಂಗ್ಲಿಷ್ ಭಾಷೆಯ ಮೇಲಿನ ಪ್ರಭುತ್ವ, ಎಚ್ಚರಿಕೆಯ ಮಾತುಗಳು, ಉಡುಗೆ-ತೊಡುಗೆ, ಅಪಾರವಾದ ಸಂಯಮ, ಎದುರಿಗಿದ್ದವರಲ್ಲಿ ಗೌರವದ ಭಾವನೆಯನ್ನು ಹುಟ್ಟಿಸುವಂತಹ ನಡವಳಿಕೆಗಳ ಮೂಲಕ ಅವರು ತಮ್ಮ `ಇಮೇಜ್~ ಪೋಷಿಸಿಕೊಂಡು ಬಂದವರು.
ಕಳೆದ ಏಳೆಂಟು ವರ್ಷಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಮಾತ್ರವಲ್ಲ, ರಾಷ್ಟ್ರಮಟ್ಟದಲ್ಲಿಯೂ ರಾಜಕಾರಣಿಗಳು ಗೌರವ ಕಳೆದುಕೊಂಡಿದ್ದು, ಬೀದಿಬೀದಿಗಳಲ್ಲಿ ಜನ ತುಚ್ಚವಾಗಿ ಮಾತನಾಡುವಂತಾಗಿದೆ. ರಾಜಕಾರಣಿಗಳು ಭ್ರಷ್ಟರು ಎನ್ನುವುದಷ್ಟೇ ಇದಕ್ಕೆ ಕಾರಣ ಅಲ್ಲ, ಭ್ರಷ್ಟಾಚಾರದ ಹಣದಿಂದ ಗಳಿಸಿದ ಶ್ರೀಮಂತಿಕೆಯ ಅಸಹ್ಯಕರ ಪ್ರದರ್ಶನ, ರೆಸಾರ್ಟ್ ರಾಜಕೀಯ, ಸದನದಲ್ಲಿಯೇ ಅಶ್ಲೀಲಚಿತ್ರಗಳ ವೀಕ್ಷಣೆ, ಸೊಂಟದ ಕೆಳಗಿನ ಭಾಷೆಯಲ್ಲಿ ಬೈದಾಟ, ರಕ್ತದ ರುಚಿ ತೋರಿಸುವ ಬೆದರಿಕೆ ಮೊದಲಾದ ಅವರ ಒಟ್ಟು ನಡವಳಿಕೆಯೇ ಜನರಲ್ಲಿ ರೇಜಿಗೆ ಹುಟ್ಟಿಸಿದೆ.
ಇಂತಹ ವಾತಾವರಣದಲ್ಲಿ ಎಸ್.ಎಂ.ಕೃಷ್ಣ ಅವರ `ಭಿನ್ನ ವ್ಯಕ್ತಿತ್ವ~ ಸಹಜವಾಗಿಯೇ ಜನರ ಮನಸ್ಸನ್ನು ಸೆಳೆಯಬಹುದು. ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿರುವ ನಗರಕೇಂದ್ರಿತ, ಮಧ್ಯಮವರ್ಗ ಮತ್ತು ಯುವವರ್ಗಕ್ಕೆ ಸೇರಿರುವ ಮತದಾರರಲ್ಲಿ ಬಹಳಷ್ಟು ಮಂದಿಗೆ ಕೃಷ್ಣ ಇಷ್ಟವಾಗಬಹುದು.
ಎರಡನೆಯ ಅನುಕೂಲತೆ ಅವರಲ್ಲಿರುವ ಅಭಿವೃದ್ಧಿಯ ಮುನ್ನೋಟ. ಬಹಳಷ್ಟು ರಾಜಕೀಯ ಪಕ್ಷಗಳು ಸೀರೆ, ಮಂಗಳಸೂತ್ರ, ಸೈಕಲ್ ಹಂಚಿಕೆ ಇತ್ಯಾದಿ ಅಗ್ಗದ ಜನಪ್ರಿಯ ಕಾರ್ಯಕ್ರಮಗಳ ದೌರ್ಬಲ್ಯಕ್ಕೆ ಬಿದ್ದುಬಿಡುತ್ತವೆ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಚಿಸಿದ್ದ ತೆರಿಗೆ ಸುಧಾರಣಾ ಆಯೋಗ, ಆಡಳಿತ ಸುಧಾರಣಾ ಆಯೋಗ, ಬೆಂಗಳೂರು ಅಭಿವೃದ್ಧಿ ಕಾರ್ಯಪಡೆ, ಬಂಡವಾಳ ಹೂಡಿಕೆದಾರರ ಜಾಗತಿಕ ಸಮಾವೇಶ, ಐಟಿ ಮತ್ತು ಬಿಟಿ ಉದ್ಯಮಕ್ಕೆ ಕೊಟ್ಟ ಪ್ರೋತ್ಸಾಹ, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ, ಗ್ರಾಮೀಣಪ್ರದೇಶದಲ್ಲಿ ವಸತಿ ನಿರ್ಮಾಣದಂತಹ ಯೋಜನೆಗಳು ಒಂದು ಸರ್ಕಾರ ಹೊಂದಿರಬೇಕಾದ ಅಭಿವೃದ್ಧಿಯ ಮುನ್ನೋಟಕ್ಕೆ ಮಾದರಿಯಾಗಿತ್ತು. ಕಳೆದ ಎಂಟು ವರ್ಷಗಳ ಆಡಳಿತವನ್ನು ಕಂಡ ಮತದಾರನಿಗೆ ಕೃಷ್ಣ ಅವರ ಕಾಲದ ಸಾಧಾರಣ ಸಾಧನೆ ಕೂಡಾ ಹಿರಿದಾದುದು ಎಂದು ಅನಿಸದೆ ಇರದು.
ಮೂರನೆಯದಾಗಿ ಕೃಷ್ಣ ಅವರ ವಯಸ್ಸು ಮತ್ತು ಅನುಭವ ಸಹಜವಾಗಿ ಯಜಮಾನನ ಸ್ಥಾನವನ್ನು ತಂದುಕೊಟ್ಟಿದೆ. ಅವರಿಗಿಂತ ಹಿರಿಯ ಜನಪ್ರಿಯ ನಾಯಕರು ರಾಜ್ಯ ಕಾಂಗ್ರೆಸ್‌ನಲ್ಲಿ ಬೇರೆ ಯಾರೂ ಇಲ್ಲ. ಒಳಜಗಳಕ್ಕೆ ಕುಖ್ಯಾತಿ ಪಡೆದ ಪಕ್ಷ ಕಾಂಗ್ರೆಸ್.
ಮೂರು ಮಂದಿ ಇದ್ದಲ್ಲಿ ನಾಲ್ಕು ಗುಂಪುಗಳಿರುತ್ತವೆ. ಡಾ.ಪರಮೇಶ್ವರ್, ಸಿದ್ದರಾಮಯ್ಯ, ಶಾಮನೂರು ಶಿವಶಂಕರಪ್ಪ ಹೀಗೆ ಪ್ರತಿ ನಾಯಕನ ಸುತ್ತ ಮರಿನಾಯಕರ ಗುಂಪುಗಳಿರುತ್ತವೆ. ಇವರ ನಡುವಿನ ಜಗಳ ಬಿಡಿಸುವ ಪಂಚಾಯಿತಿ ಕೆಲಸ ಮಾಡುವುದು ಕೃಷ್ಣ ಅವರಂತಹ ಹಿರಿಯ ಮತ್ತು ವಿವಾದಾತೀತ ನಾಯಕನಿಗೆ ಉಳಿದವರಿಗಿಂತ ಸುಲಭ.
ಈ ಮೂಲಕ ಪಕ್ಷಕ್ಕೆ ತುರ್ತಾಗಿ ಬೇಕಾಗಿರುವ ಒಗ್ಗಟ್ಟನ್ನು ಮೂಡಿಸಲು ಸಾಧ್ಯ.
ಈ ಮೂಲಕ ಪಕ್ಷಕ್ಕೆ ತುರ್ತಾಗಿ ಬೇಕಾಗಿರುವ ಒಗ್ಗಟ್ಟನ್ನು ಮೂಡಿಸಲು ಸಾಧ್ಯ.
ನಾಲ್ಕನೆಯದಾಗಿ ಕೃಷ್ಣ ಅವರ ಜಾತಿ. ಬಿಜೆಪಿಯ ಬೆಂಬಲಕ್ಕಿರುವ ಲಿಂಗಾಯತ ಮತಗಳನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನ ಪಡಬೇಕಾಗಿಲ್ಲ. ಆ ಕೆಲಸವನ್ನು ಮಾಡಲು ಆಗಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಿದ್ಧತೆ ಪ್ರಾರಂಭಿಸಿದ್ದಾರೆ. ಇನ್ನೊಂದು ಎದುರಾಳಿ ಪಕ್ಷವಾದ ಜೆಡಿ(ಎಸ್) ಬೆಂಬಲಕ್ಕಿರುವ ಒಕ್ಕಲಿಗರ ಮತಗಳನ್ನು ಒಡೆದು ಸೆಳೆಯುವಂತಹ ನಾಯಕರು ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ.
ಕೃಷ್ಣ ಅವರು ಪ್ರಶ್ನಾತೀತ ಒಕ್ಕಲಿಗ ನಾಯಕರಲ್ಲದೆ ಇದ್ದರೂ ಆ ಕೆಲಸವನ್ನು ತಮ್ಮ ಮಿತಿಯಲ್ಲಿಯೇ ಅವರು ಮಾಡಬಲ್ಲರು. ಕಾಂಗ್ರೆಸ್ ಪಕ್ಷದೊಳಗಿರುವ ಬಹಳಷ್ಟು ಅತೃಪ್ತ ಲಿಂಗಾಯತ ನಾಯಕರಿಗೂ ಎಸ್.ಎಂ.ಕೃಷ್ಣ ಆಪ್ತರು. ಅವರಲ್ಲಿ ಬಹಳಷ್ಟು ಮಂದಿ ಶಾಮನೂರು ಶಿವಶಂಕರಪ್ಪನವರನ್ನು ಕೈಬಿಟ್ಟು ಕೃಷ್ಣ ಅವರನ್ನು ಸ್ವಾಗತಿಸಲು ಹೂವಿನ ಹಾರ ಹಿಡಿದುಕೊಂಡು ನಿಂತಿದ್ದಾರೆ.
ಮೇಲ್ನೋಟಕ್ಕೆ ಇವೆಲ್ಲವೂ ಕಾಂಗ್ರೆಸ್ ಪಕ್ಷದ ಗೆಲುವಿಗೆ ನೆರವಾಗಬಲ್ಲಂತಹ ಅನುಕೂಲಗಳಂತೆ ಕಾಣುತ್ತಿವೆ. ಆದರೆ ಈ ನಾಲ್ಕು ಅನುಕೂಲತೆಗಳನ್ನು ಇನ್ನೊಂದು ಮಗ್ಗುಲಿನಿಂದ ನೋಡಿದರೆ ಇವು ಹೊಸ ಸಮಸ್ಯೆಗಳಾಗಿ ಕಾಣುತ್ತವೆ.
ಮೊದಲನೆಯದಾಗಿ ಕೃಷ್ಣ ಹೊಂದಿರುವ ಮತ್ತು ಮನುಷ್ಯ ಪ್ರಯತ್ನದ ಮೂಲಕ ಬದಲಾಯಿಸಲಾಗದ ಅನಾನುಕೂಲತೆ ಅವರ ವಯಸ್ಸು. ಅವರು 80 ವರ್ಷ ಪೂರ್ಣಗೊಳಿಸಿ 81ಕ್ಕೆ ಕಾಲಿಟ್ಟಿದ್ದಾರೆ. ಒಬ್ಬ ವ್ಯಕ್ತಿಯ `ಇಮೇಜ್~ನಲ್ಲಿ ವಯಸ್ಸಿನ ಪಾತ್ರವೂ ಇದೆ. ಜನಸಂಖ್ಯೆಯಲ್ಲಿ ಶೇಕಡಾ 65ರಷ್ಟಿರುವ 35 ವರ್ಷಗಳೊಳಗಿನ ಯುವಜನರು 80 ವರ್ಷದ ನಾಯಕನನ್ನು ಆತ ಎಷ್ಟೇ ಸಮರ್ಥನಾಗಿದ್ದರೂ ಒಪ್ಪಿಕೊಳ್ಳುತ್ತಾರೆಯೇ? ಉದ್ಯಮ ಕ್ಷೇತ್ರಗಳ ನಾಯಕರ ಸರಾಸರಿ ವಯಸ್ಸು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.
ನಿಧಾನವಾಗಿಯಾದರೂ ಈ ಬದಲಾವಣೆ ರಾಜಕೀಯದಲ್ಲಿಯೂ ಪ್ರಾರಂಭವಾಗಿದೆ. ಉತ್ತರಪ್ರದೇಶದಲ್ಲಿ ಮುಲಾಯಂಸಿಂಗ್ ತನ್ನ ಮಗನನ್ನು ಮುಖ್ಯಮಂತ್ರಿ ಮಾಡಿಬಿಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಂಜಾಬ್ ಮತ್ತು ತಮಿಳುನಾಡಿನಲ್ಲಿ ಈಗಿನ ಆಡಳಿತ ಪಕ್ಷಗಳೇ ಪುನರಾಯ್ಕೆಯಾದರೂ ಮುಖ್ಯಮಂತ್ರಿ ಸ್ಥಾನದಲ್ಲಿ ತಂದೆಯ ಬದಲಿಗೆ ಮಕ್ಕಳು ಕೂರಬಹುದು.
ಮಹಾರಾಷ್ಟ್ರ, ಗುಜರಾತ್, ಉತ್ತರಪ್ರದೇಶ, ಮಧ್ಯಪ್ರದೇಶ, ಆಂಧ್ರಪ್ರದೇಶ, ಒಡಿಶಾ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಗಳೆಲ್ಲ 60 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನವರು. ಕೃಷ್ಣ ಅವರ ಪಕ್ಷವೇ ಯುವನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲು ಹೊರಟಿದೆ.
ಈ ಪರಿಸ್ಥಿತಿಯಲ್ಲಿ ಎಂಬತ್ತು ದಾಟಿದ ಕೃಷ್ಣ ಅವರು ಪಾಂಚಜನ್ಯ ಊದಿದರೆ ಎಷ್ಟು ಮಂದಿ ಯುವಕ-ಯುವತಿಯರು ಓಡಿಬರಬಹುದು?ಎರಡನೆಯದಾಗಿ, 1999ರಲ್ಲಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಮೊದಲ ಬಾರಿಗೆ ಕೂತಾಗ ಅವರು ಹೊಂದಿದ್ದ `ಕ್ಲೀನ್ ಇಮೇಜ್~ ಈಗಲೂ ಇದೆ ಎಂದು ಹೇಳುವುದು ಕಷ್ಟ. ತಮ್ಮ ಆಡಳಿತ ಭ್ರಷ್ಟಚಾರ ಮುಕ್ತವಾಗಿತ್ತು ಎಂದು ಹೇಳುವ ಎದೆಗಾರಿಕೆ ಕೃಷ್ಣ ಅವರಿಗೂ ಇರಲಾರದು.
ನೈಸ್ ಹಗರಣದಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಅವರನ್ನು ಆರೋಪಿಯನ್ನಾಗಿ ಮಾಡಿರುವುದು ಇತ್ತೀಚಿನ ಘಟನೆ. ಅವರ ಅಧಿಕಾರಾವಧಿಯ ಕಾಲದಲ್ಲಿಯೇ ಅಕ್ರಮ ಗಣಿಗಾರಿಕೆಯ ಅಧ್ಯಾಯ ಪ್ರಾರಂಭವಾಗಿದ್ದು. ಕಾಲ ಬದಲಾಗಿದೆ, ಸಾಮಾನ್ಯ ಜನರು ಹಿಂದಿನಷ್ಟು ಅಸಹಾಯಕರಲ್ಲ. ಅವರ ಕೈಗೆ ಸಿಕ್ಕಿರುವ ಮಾಹಿತಿ ಹಕ್ಕು ಕಾಯಿದೆಯ ಅಸ್ತ್ರ ಮತ್ತು ದಿನದಿಂದ ದಿನಕ್ಕೆ ತೀವ್ರತೆ ಪಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧದ ಹೋರಾಟ ಎಂತಹ ಪ್ರಾಮಾಣಿಕ ರಾಜಕಾರಣಿಯ ಎದೆಯಲ್ಲಿಯೂ ದಿಗಿಲು ಹುಟ್ಟಿಸುವಂತಿದೆ.
ಈಗಿನ ಹೋರಾಟ ಆಟದ ನಿಯಮಗಳನ್ನು ಬದಲಿಸಿಬಿಟ್ಟಿದೆ. ರಾಜಕಾರಣಿಗಳ ಮಕ್ಕಳು ಮಾತ್ರವಲ್ಲ ಅಳಿಯಂದಿರ ಬಂಡವಾಳ ಕೂಡಾ ಬಯಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಐದು ದಶಕಗಳ ಕಾಲ ದೀರ್ಘ ರಾಜಕೀಯ ಮಾಡಿ ಅಧಿಕಾರದ ಹಲವಾರು ಸ್ಥಾನಮಾನಗಳನ್ನು ಅನುಭವಿಸಿರುವ ಕೃಷ್ಣ ಅವರ `ಕ್ಲೀನ್ ಇಮೇಜ್~ನ ಕೋಟೆಯನ್ನು ಒಡೆದುಹಾಕಲು ರಾಜಕೀಯ ವಿರೋಧಿಗಳು ಖಂಡಿತ ಪ್ರಯತ್ನ ನಡೆಸಬಹುದು.
ಈಗಿನ ಹೋರಾಟ ಆಟದ ನಿಯಮಗಳನ್ನು ಬದಲಿಸಿಬಿಟ್ಟಿದೆ. ರಾಜಕಾರಣಿಗಳ ಮಕ್ಕಳು ಮಾತ್ರವಲ್ಲ ಅಳಿಯಂದಿರ ಬಂಡವಾಳ ಕೂಡಾ ಬಯಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಐದು ದಶಕಗಳ ಕಾಲ ದೀರ್ಘ ರಾಜಕೀಯ ಮಾಡಿ ಅಧಿಕಾರದ ಹಲವಾರು ಸ್ಥಾನಮಾನಗಳನ್ನು ಅನುಭವಿಸಿರುವ ಕೃಷ್ಣ ಅವರ `ಕ್ಲೀನ್ ಇಮೇಜ್~ನ ಕೋಟೆಯನ್ನು ಒಡೆದುಹಾಕಲು ರಾಜಕೀಯ ವಿರೋಧಿಗಳು ಖಂಡಿತ ಪ್ರಯತ್ನ ನಡೆಸಬಹುದು.
ಕೃಷ್ಣ ಒಬ್ಬ ಉತ್ತಮ ಆಡಳಿತಗಾರನೆನ್ನುವ ಖ್ಯಾತಿಯ ಜತೆಯಲ್ಲಿ, ಅವರ ಅಭಿವೃದ್ಧಿಯ ಮುನ್ನೋಟ ನಗರ ಕೇಂದ್ರಿತವಾಗಿತ್ತು ಎಂಬ ಆರೋಪ ಕೂಡಾ ಇದೆ. ಬೆಂಗಳೂರು ನಗರವನ್ನು `ಸಿಲಿಕಾನ್ ಸಿಟಿ~ಯಾಗಿ ಬೆಳೆಸಲು ತೋರಿದ ಆಸಕ್ತಿಯನ್ನು ಅವರು ಗ್ರಾಮೀಣ ಅಭಿವೃದ್ಧಿಗಾಗಿ ತೋರಿಸಲಿಲ್ಲ ಎಂದು ದೂರುವವರಿದ್ದಾರೆ. ಅ
ವರ ಕಾಲದಲ್ಲಿ ಕಾಣಿಸಿಕೊಂಡ ಬರಗಾಲವನ್ನು ಎದುರಿಸಲು ವಿಫಲವಾಗಿದ್ದು ಕೂಡಾ ಕಾಂಗ್ರೆಸ್ ಸೋಲಿಗೆ ಕಾರಣ ಎನ್ನುವವರಿದ್ದಾರೆ. ಈ ದೇಶದಲ್ಲಿ ನಗರಕೇಂದ್ರಿತ ಅಭಿವೃದ್ಧಿಯ ಪೂರ್ವಗ್ರಹ ಹೊಂದಿರುವವರು ಚುನಾವಣೆಯಲ್ಲಿ ಯಶಸ್ಸು ಕಂಡದ್ದು ಕಡಿಮೆ. ಇದಕ್ಕೆ ಉದಾಹರಣೆಯಾಗಿ ಡಾ. ಮನಮೋಹನ್‌ಸಿಂಗ್ ಅವರನ್ನೇ ಉಲ್ಲೇಖಿಸಬಹುದು.
ಶರದ್ ಪವಾರ್ ತನ್ನ ವಿರುದ್ಧದ ಭ್ರಷ್ಟಾಚಾರದ ನೂರೆಂಟು ಆರೋಪಗಳ ಹೊರತಾಗಿಯೂ ರಾಜಕೀಯವಾಗಿ ಇಂದಿಗೂ ಯಶಸ್ಸು ಕಾಣಲು ಸಾಧ್ಯವಾಗಿರುವುದು ಗ್ರಾಮಕೇಂದ್ರಿತ ಅಭಿವೃದ್ಧಿ ಯೋಜನೆಗಳಿಂದಾಗಿ. ಎಚ್.ಡಿ. ದೇವೇಗೌಡರು ಬಹಳ ಜಾಣತನದಿಂದ `ಮಣ್ಣಿನ ಮಗ~ ಎಂಬ ಬಿರುದನ್ನು ಕಾಪಾಡಿಕೊಂಡು ಬಂದ ಕಾರಣದಿಂದಾಗಿಯೇ ಈಗಲೂ ರಾಜಕೀಯವಾಗಿ ಪ್ರಸ್ತುತವಾಗಿ ಉಳಿದಿದ್ದಾರೆ.
ನಗರದ ಮತದಾರರು ಕೃಷ್ಣ ಅವರಂತಹ ರಾಜಕಾರಣಿಗಳ ಬಗ್ಗೆ ಒಲವು ಹೊಂದಿರಬಹುದು. ಆದರೆ ನಗರ ಪ್ರದೇಶದಲ್ಲಿ ಚಲಾವಣೆಯಾಗುವ ಮತಗಳ ಪ್ರಮಾಣ ಎಷ್ಟು? ನಗರದ ಮತದಾರರಲ್ಲಿ ಅಷ್ಟೊಂದು ರಾಜಕೀಯ ಜಾಗೃತಿ ಹೊಂದಿದ್ದರೆ, ಜಾತಿ, ದುಡ್ಡು ಮೊದಲಾದ ದೌರ್ಬಲ್ಯಗಳು ಅವರಲ್ಲಿ ಇಲ್ಲವೆಂದಾದರೆ ಬೆಂಗಳೂರು ಪದವೀಧರ ಮತದಾರ ಕ್ಷೇತ್ರದಲ್ಲಿ ಅಶ್ವಿನ್ ಮಹೇಶ್ ಅವರಂತಹ ನಗರಪ್ರೇಮಿ, ಶಿಕ್ಷಿತ, ಜಾಗೃತ ಅಭ್ಯರ್ಥಿ ಸೋತು ಭ್ರಷ್ಟಾಚಾರದ ಆರೋಪ ಹೊತ್ತಿರುವ ರಾಮಚಂದ್ರಗೌಡರಂತಹವರು ಗೆಲ್ಲಲು ಹೇಗೆ ಸಾಧ್ಯ?
ಮೂರನೆಯದಾಗಿ ಕೃಷ್ಣ ಅವರ ಆಗಮನದಿಂದ ರಾಜ್ಯ ಕಾಂಗ್ರೆಸ್‌ನಲ್ಲಿರುವ ಒಳಜಗಳ ಶಮನವಾಗಲಿದೆ ಎಂದು ಆ ಪಕ್ಷದಲ್ಲಿರುವ ಕಡು ಆಶಾವಾದಿಗಳು ನಂಬಿದ್ದಾರೆ. 2008ರಲ್ಲಿ ಇದೇ ಕೆಲಸಕ್ಕಾಗಿ ಕೃಷ್ಣ ಅವರನ್ನು ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ಕೊಡಿಸಿ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕಕ್ಕೆ ಕಳುಹಿಸಿತ್ತೆನ್ನುವುದನ್ನು ಅವರು ಮರೆತುಬಿಟ್ಟಿದ್ದಾರೆ.
ಆದರೆ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯನವರ ಗುಂಪುಗಳ ನಡುವಿನ ಒಳಜಗಳ ಬಗೆಹರಿಸಲು ಕೃಷ್ಣ ಅವರಿಗೆ ಸಾಧ್ಯವಾಗಲಿಲ್ಲ, ಆ ಜಗಳ ಕಾಂಗ್ರೆಸ್ ಸೋಲಿನಲ್ಲಿಯೇ ಕೊನೆಗೊಂಡದ್ದು. ಆಗ ಮಾಡಲಾಗದ ಪವಾಡವನ್ನು ಕೃಷ್ಣ ಈಗ ಮಾಡುತ್ತಾರೆ ಎನ್ನುವುದಕ್ಕೆ ಖಾತರಿ ಏನಿದೆ? ತಮ್ಮ ಮಹತ್ವಾಕಾಂಕ್ಷೆಯ ಈಡೇರಿಕೆಗೆ ಕೃಷ್ಣ ನೆರವಾಗಬಹುದು ಎನ್ನುವ ವಿಶ್ವಾಸ ಇರುವವರೆಗೆ ಪರಮೇಶ್ವರ್ ಇಲ್ಲವೇ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಇರಬಹುದು.
ಆ ವಿಶ್ವಾಸ ಕಳೆದುಕೊಂಡ ಮರುಕ್ಷಣ ಅವರಿಬ್ಬರೂ ಇಲ್ಲವೇ ಅವರಲ್ಲೊಬ್ಬರು ತಿರುಗಿಬೀಳಬಹುದು. ಈ ಇಬ್ಬರು ಕಾಂಗ್ರೆಸ್ ನಂಬಿಕೊಂಡ ಮತಬ್ಯಾಂಕ್‌ನಲ್ಲಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಗೆ ಸೇರಿದವರು. ಕೃಷ್ಣ ತಂದುಕೊಡುವ ಒಕ್ಕಲಿಗರ ಮತಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ದಲಿತ-ಹಿಂದುಳಿದ ಜಾತಿಗಳ ಮತಗಳನ್ನು ಕಾಂಗ್ರೆಸ್ ಕಳೆದುಕೊಳ್ಳುವಂತಾದರೆ ಲಾಭಕ್ಕಿಂತ ನಷ್ಟ ಹೆಚ್ಚಾಗಬಹುದು.
ಆದರೆ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯನವರ ಗುಂಪುಗಳ ನಡುವಿನ ಒಳಜಗಳ ಬಗೆಹರಿಸಲು ಕೃಷ್ಣ ಅವರಿಗೆ ಸಾಧ್ಯವಾಗಲಿಲ್ಲ, ಆ ಜಗಳ ಕಾಂಗ್ರೆಸ್ ಸೋಲಿನಲ್ಲಿಯೇ ಕೊನೆಗೊಂಡದ್ದು. ಆಗ ಮಾಡಲಾಗದ ಪವಾಡವನ್ನು ಕೃಷ್ಣ ಈಗ ಮಾಡುತ್ತಾರೆ ಎನ್ನುವುದಕ್ಕೆ ಖಾತರಿ ಏನಿದೆ? ತಮ್ಮ ಮಹತ್ವಾಕಾಂಕ್ಷೆಯ ಈಡೇರಿಕೆಗೆ ಕೃಷ್ಣ ನೆರವಾಗಬಹುದು ಎನ್ನುವ ವಿಶ್ವಾಸ ಇರುವವರೆಗೆ ಪರಮೇಶ್ವರ್ ಇಲ್ಲವೇ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಇರಬಹುದು.
ಆ ವಿಶ್ವಾಸ ಕಳೆದುಕೊಂಡ ಮರುಕ್ಷಣ ಅವರಿಬ್ಬರೂ ಇಲ್ಲವೇ ಅವರಲ್ಲೊಬ್ಬರು ತಿರುಗಿಬೀಳಬಹುದು. ಈ ಇಬ್ಬರು ಕಾಂಗ್ರೆಸ್ ನಂಬಿಕೊಂಡ ಮತಬ್ಯಾಂಕ್‌ನಲ್ಲಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಗೆ ಸೇರಿದವರು. ಕೃಷ್ಣ ತಂದುಕೊಡುವ ಒಕ್ಕಲಿಗರ ಮತಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ದಲಿತ-ಹಿಂದುಳಿದ ಜಾತಿಗಳ ಮತಗಳನ್ನು ಕಾಂಗ್ರೆಸ್ ಕಳೆದುಕೊಳ್ಳುವಂತಾದರೆ ಲಾಭಕ್ಕಿಂತ ನಷ್ಟ ಹೆಚ್ಚಾಗಬಹುದು.
ಈ ಕಾರಣಗಳಿಂದಾಗಿಯೇ ಒಂದು ಕೋನದಲ್ಲಿ ರಾಜ್ಯ ಕಾಂಗ್ರೆಸ್ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರದಂತೆ ಕಾಣುವ ಎಸ್.ಎಂ. ಕೃಷ್ಣ ಇನ್ನೊಂದು ಕೋನದಲ್ಲಿ ಸಮಸ್ಯೆಯಂತೆ ಕಾಣುತ್ತಿರುವುದು.
No comments:
Post a Comment